ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ: ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

Share with

ಮಂಗಳೂರ, ನವೆಂಬರ್ 26: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದು ಬಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವದಲ್ಲಿ ಭಕ್ತಿಪೂರ್ವಕವಾಗಿ ಭಾಗವಹಿಸಿದರು. ಚಂಪಾಷಷ್ಠಿ ಮಹೋತ್ಸವವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದಾಗಿದೆ.


Share with

Leave a Reply

Your email address will not be published. Required fields are marked *