
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇಂದು & ನಾಳೆ ಕರ್ನಾಟಕದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಮುಂದಿನ ಕೆಲವು ದಿನಗಳವರೆಗೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. ಕರ್ನಾಟಕದಲ್ಲಿ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿಗೆ ಮಳೆ ಎಚ್ಚರಿಕೆ ನೀಡಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಚಳಿ ಪ್ರಮಾಣ ಕಡಿಮೆಯಾಗಲಿದ್ದು ಹಲವೆಡೆ ಒಣಹವೆ ಮುಂದುವರೆಯಲಿದೆ.




