ನವದೆಹಲಿ: ಚಂದ್ರಯಾನ–3ರ ಎರಡನೆಯ ಮತ್ತು ಕೊನೆಯ ಡಿ– ಬೂಸ್ಟಿಂಗ್ ಕಾರ್ಯ (ಲ್ಯಾಂಡರ್‌ನ ವೇಗ ತಗ್ಗಿಸುವ ಪ್ರಕ್ರಿಯೆ) ಇಂದು (ಭಾನುವಾರ) ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಇಸ್ರೊ ಹೇಳಿದೆ. ಈ ಮೂಲಕ ನೌಕೆಯು ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, ದಕ್ಷಿಣ ದ್ರುವದಲ್ಲಿ ಲ್ಯಾಂಡ್ ಆಗಬೇಕಿದೆ.
ವಿಕ್ರಮ್ ಲ್ಯಾಂಡರ್ ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿಮೀ ಮತ್ತು ಚಂದ್ರನಿಂದ 134 ಕಿಮೀ ದೂರದ ಕಕ್ಷೆಯನ್ನು ತಲುಪಿದೆ. ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನಿಸುತ್ತದೆ ಎಂದು ಇಸ್ರೊ ಹೇಳಿದೆ.
ಎರಡನೇ ಮತ್ತು ಅಂತಿಮ ಡಿ–ಬೂಸ್ಟಿಂಗ್ ಕಾರ್ಯಾಚರಣೆಯು ಚಂದ್ರನ ಕಕ್ಷೆಯನ್ನು 25 km x 134 km ನಷ್ಟು ಸನಿಹಕ್ಕೆ ತಲುಪಿದೆ. ಮಾಡ್ಯೂಲ್ ಆಂತರಿಕ ತಪಾಸಣೆಗೆ ಒಳಗಾಗುತ್ತದೆ ಮತ್ತು ನಿರ್ದಿಷ್ಟಪಡಿಸಿದ ಲ್ಯಾಂಡಿಂಗ್ ಸೈಟ್‌ನಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತಿದೆ. ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆಯು ಆಗಸ್ಟ್ 23, 2023 ರಂದು ಬೆಳಿಗ್ಗೆ ಸ್ಥಳೀಯ ಕಾಲಮಾನ 17.45 ಗಂಟೆಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಇಸ್ರೊ Xನಲ್ಲಿ ತಿಳಿಸಿದೆ.