ವೀಕ್ಷಕವಾಣಿ: ಭಾರತದ ಭರವಸೆ ಹಾಗೂ ಕನಸುಗಳನ್ನು ಹೊತ್ತ ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಯಶಸ್ವಿಯಾಗಿ ಉಡಾವಣೆಯಾಗಿದೆ. ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿಂದ ನಭಕ್ಕೆ ಚಿಮ್ಮಿದ ನೌಕೆ, ಆ.23 ಅಥವಾ 24ರಂದು ಚಂದ್ರನ ಮೇಲೆ ಇಳಿಯಲಿದೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿರಂತರ ಪ್ರಯತ್ನದ ಫಲದಿಂದ ಚಂದ್ರಯಾನ-3 ವ್ಯೋಮನೌಕೆಯನ್ನು ಹೊತ್ತ ಎಲ್‌ವಿಎಂ-3 ರಾಕೆಟ್ ನಭಕ್ಕೆ ಚಿಮ್ಮಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿಂದ ಮಧ್ಯಾಹ್ನ 2.35ಕ್ಕೆ ಸರಿಯಾಗಿ ನೌಕೆ ಪಯಣ ಆರಂಭಿಸಿತು. ಉಡಾವಣೆ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳು ನೌಕೆಯ ಹಂತ ಹಂತದ ಅಪ್‌ಡೇಟ್ ನೀಡಿದರು. ಪ್ರತಿಯೊಂದು ಸ್ಟೇಜ್ ದಾಟುತ್ತಿದ್ದಂತೆ ವಿಜ್ಞಾನಿಗಳು ಚಪ್ಪಾಳೆ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಚಂದ್ರಯಾನದ-3 ರ ಉಡಾವಣೆಯ ದೃಶ್ಯಾವಳಿಗಳನ್ನು ಜನರು ನೇರಪ್ರಸಾರದ ಮೂಲಕ ವೀಕ್ಷಿಸಿ ಸಂತೋಷ ವ್ಯಕ್ತಪಡಿಸಿದ್ದಾರೆ.