ಪುತ್ತೂರು: ಒಂಬತ್ತು ತಿಂಗಳ ಹಿಂದೆ ಈಶ್ವರಮಂಗಲದ ಶನ್ಯ ರೆಸ್ಟೋರೆಂಟ್‌ನಲ್ಲಿ ನಡೆದ ಕಳವು ಪ್ರಕರಣದ ಆರೋಪಿ ಐವರ್ನಾಡು ನಿವಾಸಿ ಶಿವಪ್ರಸಾದ್ ಎಂಬಾತನಿಗೆ ಪುತ್ತೂರು ಎಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಆತ ಅದೇ ರೆಸ್ಟೋರೆಂಟ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು ಎ. 21ರಿಂದ 24ರ ಮಧ್ಯೆ ಕಿಚನ್ ವಿಭಾಗದ ಬಾಗಿಲು ಮುರಿದು ಡ್ರಾವರ್‌ನಲ್ಲಿ ಇದ್ದ 90 ಸಾವಿರ ರೂ. ನಗದು ಕಳವು ಮಾಡಿದ್ದ.

ಕೃತ್ಯದ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿತ್ತು. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸುಷ್ಮಾ ಭಂಡಾರಿ ಅವರು ಪ್ರಕರಣದ ವಿಚಾರಣೆ ನಡೆಸಿ ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ತ್ವರಿತವಾಗಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರಕಾರದ ಪರವಾಗಿ ಚೇತನಾದೇವಿ ವಾದ ಮಂಡಿಸಿದ್ದರು.




