ದೇಶದ ಹಲವೆಡೆ ಕೋಳಿ ಮಾಂಸ ಮತ್ತು ಮೊಟ್ಟೆಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಸರಣಿ ಹಬ್ಬಗಳ ಆಗಮನವೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಪ್ರಸ್ತುತ, ಒಂದು ಡಜನ್ ಮೊಟ್ಟೆಗಳ ಬೆಲೆ 95 ರಿಂದ 100 ರೂ. ತಲುಪಿದೆ.

ಒಂದು ಕೆಜಿ ಕೋಳಿ ಮಾಂಸದ ಬೆಲೆ 270 ರೂ. ತಲುಪಿದ್ದು, ಇದು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಈ ಬೇಡಿಕೆ ಮುಂದುವರಿದರೆ, ಮುಂದಿನ ದಿನಗಳಲ್ಲಿ ಕೋಳಿ ಮಾಂಸದ ಬೆಲೆ 300 ರೂ. ತಲುಪುವ ಸಾಧ್ಯತೆಯಿದೆ ಎಂದು ಮೂಲಗಳು ಅಂದಾಜಿಸಿವೆ.




