ಬಾಲ್ಯ ವಿವಾಹ ಮುಕ್ತ ಅಭಿಯಾನ ಕಾರ್ಯಕ್ರಮ

Share with

ಬಂಟ್ವಾಳ: ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬಾಲ್ಯ ವಿವಾಹ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬಾಲ್ಯ ವಿವಾಹ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧದ ಕುರಿತು ಮಾಹಿತಿಯನ್ನು ನೀಡಲಾಯಿತು. ಸಂಸ್ಥೆಯ ಶಿಕ್ಷಕಿಯಾದ ಭಾಗ್ಯಲಕ್ಷ್ಮಿ ಅವರು ಬಾಲ್ಯ ವಿವಾಹದಿಂದಾಗುವ ತೊಡಕುಗಳು, ಅದರಿಂದಾಗಿ ಸಮಾಜದಲ್ಲಿ ಉದ್ಭವಿಸಬಹುದಾದ ತೊಂದರೆಗಳ ಕುರಿತು ಅರಿವು ಮೂಡಿಸಿದರು.

ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷ ಪುರುಷೋತ್ತಮ್ ಅಂಚನ್, ಪ್ರೌಢಶಾಲಾ ವಿಭಾಗದ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


Share with

Leave a Reply

Your email address will not be published. Required fields are marked *