ಮಂಗಳೂರು: ಮಂಗಳೂರು ನಗರ ಶಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಸೋಮನ ಗೌಡ ಚೌದರಿ (31) ಎಂಬುವವರು ಮೃತ ದುರ್ದೈವಿಯಾಗಿದ್ದು, ವಯರ್ ಲೆಸ್ ಇನ್ಸ್ಪೆಕ್ಟರ್ ವಾಹನಕ್ಕೆ ಚಾಲಕನಾಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು. ಇವರು ಮೂಲತಃ ಬಿಜಾಪುರ ಜಿಲ್ಲೆಯವರಾಗಿದ್ದಾರೆ. ಇನ್ಸ್ಪೆಕ್ಟರ್ ಗೆ ಡೆಂಗ್ಯೂ ಜ್ವರ ಭಾದಿಸಿದ್ದರಿಂದ ನಗರದ ಫಳ್ನಿರ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಮಂಗಳವಾರ ಬೆಳಿಗ್ಗೆ ಕರೆದುಕೊಂಡು ಹೋಗಿದ್ದರು.
ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಲು ಹೋದ ಸಂದರ್ಭ ಸೋಮನಗೌಡ ಏಕಾಎಕಿ ಕುಸಿದು ಬಿದ್ದಿದ್ದು, ಕೂಡಲೇ ಸ್ಥಳೀಯರು ಧಾವಿಸಿ 112 ಗೆ ಕರೆ ಮಾಡಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲು ಕೊಂಡುಹೋಗುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ವಿವಾಹಿತರಾಗಿರುವ ಸೋಮನಗೌಡ ಕಳೆದ 7 ವರ್ಷಗಳಿಂದ ನಗರ ಶಶಸ್ತ್ರ ದಳದಲ್ಲಿ ಸೇವೆ ಸಲಿಸುತ್ತಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.