ಬಂಟ್ವಾಳ: ಪುರಸಭೆಯಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಪೌರಕಾರ್ಮಿಕರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಸರ್ಕಾರಿ ಆಸ್ಪತ್ರೆಯ ವೈದ್ಯರು ಭಾಗವಹಿಸಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು ಹಾಗೂ ಖಾಯಂ ಗೊಂಡ ಪೌರ ಕಾರ್ಮಿಕರಿಗೆ ಜಿಲ್ಲಾಧಿಕಾರಿಗಳು ನೀಡಿದ ನೇಮಕಾತಿ ಆದೇಶವನ್ನು ವಿತರಿಸಲಾಯಿತು. ನಂತರ ಪೌರಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರು ಹಾಗೂ ಚಾಲಕರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಈ ಕಾರ್ಯಕ್ರಮದಲ್ಲಿ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರು ಅಧ್ಯಕ್ಷತೆ ವಹಿಸಿದ್ದು, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಹರಿಪ್ರಸಾದ್, ಶಶಿಕಲಾ, ದೇವಕಿ, ಮಹಿಳಾ ಒಕ್ಕೂಟದ ಅಧ್ಯಕ್ಷೆ ವಸಂತಿ ಅವರು ಉಪಸ್ಥಿತರಿದ್ದರು. ದ್ವಿತೀಯ ದರ್ಜೆ ಸಹಾಯಕಿ ರಮಣಿ ಪ್ರಾರ್ಥನೆಯನ್ನು ನೆರವೇರಿಸಿದ್ದು, ಕಚೇರಿ ಸಹಾಯಕಿ ಸುಶೀಲ ಅವರು ಸ್ವಾಗತಿಸಿದರು. ಸಮುದಾಯ ಸಂಘಟಕರಾದ ಉಮಾವತಿ ಅವರು ಕಾರ್ಯಕ್ರಮ ನಿರೂಪಿಸಿದರು.