ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬೋಳಂತೂರು, ನರಿಕೊಂಬು ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Share with

ಭಾರತೀಯ ಜೀವಾ ವಿಮಾ ನಿಗಮ ಉಡುಪಿ ವಿಭಾಗ ಇದರ 2022-2023ನೇ ಸಾಲಿನ ವಿಮಾ ಗ್ರಾಮ ಯೋಜನೆ ಅಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಕ್ರೋ ಇನ್ಸೂರೆನ್ಸ್ ಮೂಲಕ ನರಿಕೊಂಬು ಗ್ರಾಮವನ್ನು ವಿಮಾ ಗ್ರಾಮ ಎಂದು ಘೋಷಿಸಿ, ಈ ವಿಮಾ ಗ್ರಾಮ ಯೋಜನೆಯಲ್ಲಿ ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬೋಳಂತೂರು, ನರಿಕೊಂಬು ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರ ಮಾಡಲಾಯಿತು.

ಪ್ರಾಥಮಿಕ ಶಾಲೆ ಬೋಳಂತೂರು, ನರಿಕೊಂಬು ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾಗಿರುವ ಮಹಾಬಲ ಕುಲಾಲ್, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ದಕ್ಷಿಣ ಕನ್ನಡ ಜಿಲ್ಲಾ ವಿಮಾ ಸಮನ್ವಯ ಅಧಿಕಾರಿ ಹೇಮಲತಾ ಹೆಗ್ಡೆ, ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್, ಸದಸ್ಯ ಕಿಶೋರ್ ಶೆಟ್ಟಿ, ಶಾಲಾ ದತ್ತು ಸಮಿತಿಯ ಸಂಚಾಲಕರಾದ ರಾಮಕೃಷ್ಣ ಭಟ್, ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಮಮತಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಸಪಲ್ಯ, ಉಪಾಧ್ಯಕ್ಷೆ ಪುಷ್ಪಾವತಿ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪ್ರೆಸ್ಸಿಲ್ಲ, ಸೇವಾ ಪ್ರತಿನಿಧಿಗಳಾದ ಕುಸುಮಾವತಿ ಪ್ರತಿಭಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳು, ಶಿಕ್ಷಕ ವೃಂದ, ಶಾಲಾ ಮಕ್ಕಳು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *