ಮಂಜೇಶ್ವರ: ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ಮಂಜೇಶ್ವರ ತಾಲೂಕಿನ ಬಂಗ್ರ ಮಂಜೇಶ್ವರ ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನದಲ್ಲಿ 1766ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಹಾಗೂ ಸಮಾರೋಪ ಸಮಾರಂಭ ಡಿ.12ರಂದು ನೆರವೇರಿತು.
ಕುಟುಂಬ ದಿನವನ್ನು ಜನಜಾಗ್ರತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರು ನೆರವೇರಿಸಿದರು. 66 ಮಂದಿ ಶಿಬಿರಾರ್ಥಿ ಬಂಧುಗಳು ಹೊಸ ಜೀವನಕ್ಕೆ ಕಾಲಿಟ್ಟರು. ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಮಠದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕಡಂಬಾರುರವರು ವಹಿಸಿಕೊಂಡಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಜನಜಾಗ್ರತಿ ವೇದಿಕೆಯ ಅದ್ಯಕ್ಷರಾದ ಪದ್ಮನಾಭ ಶೆಟ್ಟಿ, ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೆಗೌಡ , ಜನಜಾಗ್ರತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್, ಜನಜಾಗ್ರತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಅಶ್ವಥ್ ಪೂಜಾರಿ ಲಾಲ್ ಭಾಗ್, ಭಜನಾ ಪರಿಷತ್ ಅಧ್ಯಕ್ಷರಾದ ದಿನೇಶ್ ಚೆರುಗೊಳಿ, ಮಂಜೇಶ್ವರ ಗ್ರಾಮ ಪಂಚಾಯತ್ ಸದಸ್ಯರಾದ ಯಾದವ ಬಡಾಜೆ, ಮಜಿಬೈಲ್ ಒಕ್ಕೂಟದ ಅಧ್ಯಕ್ಷ ಭಾಸ್ಕರ ಭಂಡಾರಿಯವರು ಅತಿಥಿಗಳಾಗಿ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿಕಟ ಪೂರ್ವ ಅಧ್ಯಕ್ಷರಾದ ಗೋಪಾಲ್ ಶೆಟ್ಟಿ ಅರಿಬೈಲ್, ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ವ್ಯವಸ್ಥಾಪನಾ ಸಮಿತಿಯ ಗೌರವಾದ್ಯಕ್ಷ ಹರಿಶ್ಚಂದ್ರ ಶೆಟ್ಟಿಗಾರ್, ಕೋಶಾಧಿಕಾರಿ ರವಿ ಮುಡಿಮಾರ್, ಜನಜಾಗ್ರತಿ ವೇದಿಕೆಯ ಸದಸ್ಯ ಹರೀಶ್ ಶೆಟ್ಟಿ ಮಾಡ, ಕಾಸರಗೋಡು ಭಜನಾ ಪರಿಷತ್ತು ಅಧ್ಯಕ್ಷ ವೆಂಕಟರಮಣ ಹೊಳ್ಳ, ಮಂಜೇಶ್ವರ ತಾಲ್ಲೂಕಿನ ಕೇಂದ್ರ ಒಕ್ಕೂಟದ ಅಧ್ಯಕ್ಷ ಉದಯಕುಮಾರ್, ಜನಜಾಗ್ರತಿ ವೇದಿಕೆಯ ಪದಾದಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು, ಜನಜಾಗ್ರತಿ ವೇದಿಕೆಯ ಯೋಜನಾಧಿಕಾರಿ, ಶೌರ್ಯ ವಿಪತ್ತು ಘಟಕದ ಯೋಜನಾಧಿಕಾರಿ, ಕಾಸರಗೋಡು, ಮಂಜೇಶ್ವರ ತಾಲ್ಲೂಕಿನ ಯೋಜನಾಧಿಕಾರಿಗಳು, ಶಿಬಿರಾಧಿಕಾರಿ, ಆರೋಗ್ಯ ಸಹಾಯಕಿ, ನವಜೀವನ ಸಮಿತಿ ಸದಸ್ಯರು, ಶೌರ್ಯವಿಪತ್ತು ಘಟಕದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಯೋಜನೆಯ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು, ಸೇವಾಪ್ರತಿನಿಧಿಗಳು, ಸಾರ್ವಜನಿಕ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.