ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರು ಘೋಷಣೆ ಮಾಡಿದ ಸಿಎಂ

Share with

ಬೆಂಗಳೂರು: ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದ್ದು ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ಸಿಎಂ ಸಿದ್ದರಾಮಯ್ಯ ಅವರು ನೆರವೇರಿಸಿದರು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಧು ಬಂಗಾರಪ್ಪ, ರಿಜ್ವಾನ್ ಅರ್ಷದ್ ಸೇರಿದಂತೆ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.

ನಾಡಿನ ಎಲ್ಲ ಕನ್ನಡಿಗರಿಗೆ ಶುಭಾಶಯಗಳನ್ನು ತಿಳಿಸಿದ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರು ಘೋಷಣೆ ಮಾಡಿದ ಸಿಎಂ.

“ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರು” ನೀಡುವುದಾಗಿ ಭರವಸೆಯನ್ನು ನೀಡಿದರು. ಕೇಂದ್ರ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ನಮ್ಮ ಮಕ್ಕಳಿಗೆ ತಿಳಿದಿರುವ ಭಾಷೆಯಲ್ಲಿ ಪರೀಕ್ಷೆ ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆಯುತ್ತೇನೆ ಎಂದರು. ನಾಡಿನ ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು. ದುರದೃಷ್ಟವಶಾತ್ ರಾಜ್ಯದಲ್ಲಿ ಅನೇಕ ಜಾತಿ, ಧರ್ಮ ಇದೆ. ಇದರಿಂದ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ. ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು, ಶಿಕ್ಷಣ ಇಲಾಖೆ ಕೆಲಸ ಮಾಡಬೇಕಿದೆ. ಕನಿಷ್ಠ ಎಸ್‌ಎಸ್‌ಎಲ್‌ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು. ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್, ಕುಡಿಯುವ ನೀರು ಕೊಡುವಂತೆ ಒತ್ತಾಯ ಮಾಡಿದ್ದಾರೆ. ಎಲ್ಲ ಸರ್ಕಾರಿ ಶಾಲೆಗಳಲ್ಲೂ ಇಂದಿನಿಂದ ಉಚಿತವಾಗಿ ವಿದ್ಯುತ್, ಕುಡಿಯುವ ನೀರು ನೀಡುತ್ತೇವೆ ಎಂದರು.

ಇನ್ನು ಧ್ವಜಾರೋಹಣದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಧು ಬಂಗಾರಪ್ಪ, ರಿಜ್ವಾನ್ ಅರ್ಷದ್ ಸೇರಿದಂತೆ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.


Share with

Leave a Reply

Your email address will not be published. Required fields are marked *