ಆರು ಜಿಲ್ಲೆಗಳ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಸಭೆ ನಡೆಸಿದ್ದಾರೆ.
ಶಾಸಕರ ಅಸಮಾಧಾನ ಹಾಗೂ ಲೋಕಸಭಾ ಚುನಾವಣೆ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ. ಬೆಳಗ್ಗೆ ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳ ಶಾಸಕರೊಂದಿಗೆ ಸಭೆ ನಡೆಸಲಾಗಿದ್ದು, ಸಂಜೆ ಬೆಳಗಾವಿ, ಹಾವೇರಿ, ಕಲಬುರಗಿ ಜಿಲ್ಲೆಗಳ ಶಾಸಕರು, ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯಸಭಾ ಸದಸ್ಯರು, ಪರಿಷತ್ ಸದಸ್ಯರ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ.