ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಲೆದಂಡ ಆಗದೆ ನಾವು ವಿರಮಿಸುವುದಿಲ್ಲ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕ ಆರ್.ಅಶೋಕ್, ನಮ್ಮ ಶಾಸಕರು ವಿರಮಿಸುವ ಪ್ರಶ್ನೆಯೇ ಇಲ್ಲ. ಈ ರಾಜ್ಯದ ಗೌರವ ಎತ್ತಿ ಹಿಡಿಯುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ತಿಳಿಸಿದ್ದಾರೆ.




