ರಾಜ್ಯ ಸರ್ಕಾರವು ವಾಣಿಜ್ಯ ತೆರಿಗೆ ಇಲಾಖೆಯಿಂದ ಬೀದಿಬದಿ, ಮಧ್ಯಮ, ಸಣ್ಣ & ಅತಿ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. CM ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಕೊಡಿಸಿ, ವಸೂಲಿಗೆ ಇಳಿಸಿದ್ದಾರೆ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ಮತ್ತೊಂದು ಕಡೆ ಮಾನ್ಯ CM ಸೇರಿ ಸಚಿವ ಸಂಪುಟದ ಸದಸ್ಯರು ಕೇಂದ್ರ ಸರ್ಕಾರವನ್ನು ದೂರುವ ಕುತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.




