ಮಂಗಳೂರು: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆ. 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು.
ಮುಖ್ಯಮಂತ್ರಿಗಳ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಆಗಮಿಸಿದ್ದಾರೆ.
ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ, ದ.ಕ. ಜಿಲ್ಲಾಧಿಕಾರಿ ಮುಲ್ಫ್ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಯುಕುಮಾರ್, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.