ಕರಾವಳಿ ಬಿಜೆಪಿ ನಾಯಕರು ದ್ವೇಷ ಭಾಷಣದಿಂದಲೇ ಬದುಕ್ತಿದ್ದಾರೆ: ಸಚಿವ ಮಧು ಬಂಗಾರಪ್ಪ

Share with

ರಾಜ್ಯದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ದ್ವೇಷ ಭಾಷಣ ತಡೆ ಕಾಯ್ದೆ ಜಾರಿಗೆ ತರಲಾಗುತ್ತಿದೆ. ದ್ವೇಷ ಭಾಷಣ ತಡೆ ಮಸೂದೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಷಿಯಲ್ ಮೀಡಿಯಾದಲ್ಲಿ ಬಂದಿದ್ದನ್ನು ಹಿಡಿದು ಸದನದಲ್ಲಿ ಕೆಲವರು ಪ್ರಶ್ನೆ ಮಾಡುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ಬರುವುದೆಲ್ಲ ನಿಜವೇ ಎಂಬುದನ್ನು ಅರಿಯಬೇಕಿದೆ. ಕರಾವಳಿ ಭಾಗದ ಕೆಲ ಬಿಜೆಪಿ ಮುಖಂಡರು ಸೇರಿದಂತೆ ಹಲವಾರು ಮುಖಂಡರು ದ್ವೇಷ ಭಾಷಣ ಮಾಡಿಕೊಂಡೇ ಬದುಕುತ್ತಿದ್ದಾರೆ. ನರೇಗಾ ಯೋಜನೆಯಲ್ಲಿ ಮಹಾತ್ಮ ಗಾಂಧಿ ಹೆಸರೇ ಕೈಬಿಟ್ಟಿದ್ದಾರೆ. ಇದರಂತಹ ನೀಚ ಕೆಲಸ ಮತ್ತೊಂದಿಲ್ಲ. ಗಾಂಧೀಜಿ ದುಡಿಯುವ ಕೈಗೆ ಕೆಲಸ ಕೊಡಿ ಎಂದಿದ್ದರು. ಆದರೆ, ಬಿಜೆಪಿಯವರು ಅವರ ಹೆಸರನ್ನೇ ನರೇಗಾ ಯೋಜನೆಯಲ್ಲಿ ಕೈಬಿಟ್ಟಿದ್ದಾರೆ ಎಂದು ಕಿಡಿಕಾರಿದರು.


Share with

Leave a Reply

Your email address will not be published. Required fields are marked *