ದಕ್ಷಿಣ ಕನ್ನಡ: ಕರ್ನಾಟಕದ ಕರಾವಳಿ ಹಾಗೂ ಕೆಲವು ಪ್ರದೇಶಗಳಲ್ಲಿ ಸೆ.18ರ ತನಕ ಮಳೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಇನ್ನು ಕರಾವಳಿಯಲ್ಲಿ ಈಗಾಗಲೇ ಕೆಲವು ಸ್ಥಳಗಳಲ್ಲಿ ಮಳೆಯಾಗಿದ್ದು, ಒಳನಾಡಿನ ಒಂದೆರಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.