ಬಂಟ್ವಾಳ: ತೆಂಗು ಬೆಳೆಯ ಸೂಕ್ಷ್ಮತೆಯನ್ನು ತಿಳಿದುಕೊಳ್ಳಿ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತೆಂಗು ಬೆಳೆಗಾರ ಕೊಂಡಾಣ ಚಂದ್ರಶೇಖರ ಗಟ್ಟಿ ಹೇಳಿದರು.
ಅವರು ಜು. 15ರಂದು ಬಿ ಸಿ ರೋಡ್ ರಂಗೋಲಿ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆ ಹಾಗೂ ತೆಂಗು ಉತ್ಪಾದಕರ ಸೌಹಾರ್ಧ ಸಹಕಾರಿ ಆಶ್ರಯದಲ್ಲಿ ನಡೆದ ತೆಂಗು ಬೆಳೆ ಮಾಹಿತಿ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಾನು ಸಾಫ್ಟ್ ವೇರ್ ಇಂಜಿನಿಯರ್ ವೃತ್ತಿ ತ್ಯಜಿಸಿ ತೆಂಗಿನ ಕೃಷಿ ಆರಂಭಿಸಿ ಲಕ್ಷಾಂತರ ಆದಾಯ ಪಡೆಯುತ್ತಿದ್ದೇನೆ ಎಂದರು.
ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜೊ ಪ್ರದೀಪ್ ಡಿಸೋಜ ಮಾತನಾಡಿ ಬೆಳೆ ವಿಮೆ, ಬೆಳೆ ಸಮೀಕ್ಷೆ, ತೋಟಗಾರಿಕಾ ಇಲಾಖೆ ಯೋಜನೆಗಳ ಮಾಹಿತಿ ನೀಡಿದರು.

ಸಹಕಾರಿ ಅಧ್ಯಕ್ಷ ರಾಜ್ ಬಂಟ್ವಾಳ್, ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ, ವಿಠಲ ಸಪಲ್ಯ, ಸದಾಶಿವ ಬಂಗುಳೆ, ಯಾದವ ದರ್ಕಾಸ್, ನಾಗೇಶ್ ಕಲ್ಯಾರ್, ಶ್ರೀಮತಿ ಶಶಿಕಲಾ ಕೆ., ಸಿಇಒ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.
ಕೃಷ್ಣಪ್ಪ ಸಪಲ್ಯ ಅಂತರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.