ರಾಜ್ಯದಲ್ಲಿ ಇನ್ನು 3 ದಿನ ಚಳಿ ಜೊತೆಗೆ ಒಣಹವೆ

Share with

ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ವರ್ಷಾಂತ್ಯದ ವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆಯೇ ಇರಲಿದೆ. ಇನ್ನು ಹೊಸ ವರ್ಷಕ್ಕೆ ರಾಜ್ಯದ ಕರಾವಳಿ ಮಲೆನಾಡು, ಇತರೆ ಜಿಲ್ಲೆಗಳಲ್ಲಿ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ.


Share with

Leave a Reply

Your email address will not be published. Required fields are marked *