ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದ ನೀರನ್ನು ಪೋಲು ಮಾಡದೇ ಮನೆಯ ಲ್ಲೇ ಸಂಗ್ರಹಿಸಿಟ್ಟುಕೊಳ್ಳಿ ಎಂದು ಜನರಿಗೆ ರಕ್ಷಣಾ ಸಚಿವ ಕ್ವಾಜಾ ಆಸಿಫ್ ಸಲಹೆ ನೀಡಿದ್ದಾರೆ. ಅಲ್ಲದೇ ಪ್ರವಾಹವನ್ನು ವರದಾನ ಎಂದು ಪರಿಗಣಿಸಬೇಕು ಎಂದಿದ್ದಾರೆ.

ವಾಹಿನಿಯೊಂದಕ್ಕೆ ನೀಡಿದ ಸಂದರ್ಶನ ದಲ್ಲಿ ಮಾತನಾಡಿದ ಅವ ರು, ಪ್ರವಾಹ ಪರಿಸ್ಥಿತಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಜನ, ನೀರನ್ನು ಬಕೆಟ್ ಗಳಲ್ಲಿ ಸಂಗ್ರಹಿಸಿಟ್ಟುಕೊಳ್ಳುವ ಬಗ್ಗೆ ಯೋಚಿಸ ಬೇಕು ಎಂದಿದ್ದಾರೆ.
ಪಾಕ್ನ ಪಂಜಾಬ್ ಪ್ರಾಂತ್ಯದಲ್ಲಿ 1000ಕ್ಕೂ ಹೆಚ್ಚು ಊರುಗಳು ಮುಳುಗಡೆಯಾಗಿದ್ದು, 24 ಲಕ್ಷ ಜನರು ಸಂಕಷ್ಟಕ್ಕೀಡಾಗಿದ್ದಾರೆ.




