ಪುತ್ತೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ, ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ದೀಕ್ಷಿತಾ (17) ಸೂಸೈಡ್ ಮಾಡಿಕೊಂಡ ಯುವತಿ.
ಈಕೆ ಏಕಾಏಕಿ ಜೀವನ ಅಂತ್ಯಗೊಳಿಸುವ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.