ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಬನ್ನೂರು ಬಳಿಯ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ.
ಖಾಸಗಿ ಕಾಲೇಜುನಲ್ಲಿ ಓದುತ್ತಿದ್ದ ಕೀರ್ತಿಕಾ ಮೃತ ಯುವತಿಯಾಗಿದ್ದು, ಮನೆಯ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.