ಪುತ್ತೂರು: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಸಾವು..!

Share with

ಪುತ್ತೂರು: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸಂಪ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಸಂಪ್ಯ ನಿವಾಸಿ, ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಿಶಾ.

ಸಂಪ್ಯ ನಿವಾಸಿ, ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಿಶಾ(17) ಮೃತಪಟ್ಟವರು.

ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆದರೆ ಸ್ಪರ್ಧೆಯಲ್ಲಿ ಬಹುಮಾನ ದೊರಕದ ಕಾರಣ ಬೇಸರಗೊಂಡಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದ ನಿಶಾ ನ.13ರಂದು ಮನೆಯಲ್ಲಿದ್ದ ತೋಟಕ್ಕೆ ಸಿಂಪಡಿಸುವ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ.

ಅಸ್ವಸ್ಥಗೊಂಡಿದ್ದ ನಿಶಾ ಅವರನ್ನು ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿರುವ ವಿಚಾರ ತಿಳಿಸಿದ್ದು ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನ.25ರಂದು ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *