ಉಡುಪಿ: ಕಾಪು ಮಂಡಲ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾದ ಕಿಶೋರ್ ಕುಮಾರ್ ಅವರನ್ನು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಹಾಗೂ ಜನಪ್ರತಿನಿಧಿಗಳು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.