ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ಎ.2ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ ವಿನಯಕುಮಾರ್ ಸೊರಕೆ ಅವರು ಹೊಸ ಜವಾಬ್ದಾರಿ ವಹಿಸಿಕೊಂಡ ಬಳಿಕ ಇಂದು ರಾತ್ರಿ 8ಗಂಟೆಗೆ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಹೆಜಮಾಡಿಯ ಟೋಲ್‌ಗೇಟ್ ಬಳಿ ಸ್ವಾಗತಿಸಿ ಉಡುಪಿಗೆ ಕರೆದುಕೊಂಡು ಬರಲಾಗುವುದು ಎಂದು ಅವರು ಹೇಳಿದ್ದಾರೆ.