ವಿಟ್ಲ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶನಿವಾರ ವಿಟ್ಲದ ವಿವಿಧ ಕಡೆಗಳಿಗೆ ಭೇಟಿ ನೀಡಿದರು. ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಕ್ಕೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದುಕೊಂಡರು.
ಬಳಿಕ ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಆ ನಂತರ ಪೆರುವಾಯಿ ಶೋಕಮಾತಾ ಚರ್ಚ್’ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.