ರಾಹುಲ್ ಗಾಂಧಿ ಸದಸ್ಯತ್ವವನ್ನು ಸಂಸತ್ತು ಮರು ಸ್ಥಾಪಿಸಿದ ಹಿನ್ನೆಲೆ ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ಮಾಡಿದ್ದಾರೆ.
ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಕಾಂಗ್ರೆಸ್ ನಾಯಕರು ಸಿಹಿ ಹಂಚಿಕೊಂಡು ಖುಷಿಪಟ್ಟಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ‘ರಾಹುಲ್ ಗಾಂಧಿ ಅವರನ್ನು ಸಂಸದರಾಗಿ ಮರುಸ್ಥಾಪಿಸುವ ನಿರ್ಧಾರ ಸ್ವಾಗತಾರ್ಹ ಕ್ರಮ. ಇದು ಭಾರತದ ಜನರಿಗೆ & ವಿಶೇಷವಾಗಿ ವಯನಾಡಿಗೆ ಸಮಾಧಾನ ತಂದಿದೆ’ ಎಂದು ಖರ್ಗೆ ಹೇಳಿದ್ದಾರೆ.