ಉಡುಪಿ: ಈಶ್ವರಪ್ಪ ವಿರುದ್ಧ ಸೂಕ್ತ ಸಂದರ್ಭದಲ್ಲಿ ಸರಿಯಾದ ತೀರ್ಮಾನ; ಕಾಂಗ್ರೆಸ್ ಹತಾಶೆಯಿಂದ ಪತ್ರಿಕೆಗಳಲ್ಲಿ ಜಾಹೀರಾತು ನೀಡುತ್ತಿದೆ: ಬಿ.ವೈ.ವಿಜಯೇಂದ್ರ

Share with

ಉಡುಪಿ: ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಈಶ್ವರಪ್ಪನವರ ವಿಚಾರ ರಾಷ್ಟ್ರೀಯ ನಾಯಕರ ಗಮನದಲ್ಲಿದೆ. ಈ ಬಗ್ಗೆ ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಈಶ್ವರಪ್ಪ ಸ್ಪರ್ಧೆಯ ಪರಿಣಾಮ ಏನು ಕೂಡ ಆಗಲ್ಲ. ಮೋದಿಯ ಜನಪ್ರಿಯತೆ ಮತ್ತು ರಾಘವೇಂದ್ರ ಅಭಿವೃದ್ಧಿ ಕೆಲಸದಿಂದ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಾತಾವರಣ ನಮಗೆ ಪೂರಕವಾಗಿದೆ. ಮೋದಿ ಪ್ರಧಾನಿ ಆಗ ಬೇಕೆಂಬುದು ಎಲ್ಲರ ಅಭಿಪ್ರಾಯವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರತಿದಿನ ಉತ್ಸಾಹ ಕುಸಿಯುತ್ತಿದೆ. ಮೋದಿ ಜನಪ್ರಿಯ ಕಾರಣಕ್ಕೆ ರಾಜ್ಯದ ಯಾವುದೇ ಸಚಿವರು ಸ್ಪರ್ಧೆ ಮಾಡಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದರು.

ಕಾಂಗ್ರೆಸ್ ಹತಾಶ ಭಾವನೆಯಿಂದ ಪತ್ರಿಕೆಗಳಲ್ಲಿ ಜಾಹೀರಾತು ನೀಡುತ್ತಿದೆ. ಗ್ಯಾರೆಂಟಿ ಯೋಜನೆಗಳ ವೈಫಲ್ಯತೆಯಿಂದ ಕಾಂಗ್ರೆಸ್ಸಿಗೆ ಜ್ಞಾನೋದಯವಾಗಿದೆ. ಗೆಲ್ಲುವುದಿಲ್ಲ ಎಂದು ಗ್ಯಾರಂಟಿ ಆದ ನಂತರ ಹತಾಶೆಯಿಂದ ಜಾಹೀರಾತು ನೀಡುತ್ತಿದ್ದಾರೆ. ಇದಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.


Share with

Leave a Reply

Your email address will not be published. Required fields are marked *