ಉಡುಪಿ: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿತ್ರೋಡಿ ಭಾಗದಲ್ಲಿ ನದಿಗೆ ಖಾರ್ಲ್ಯಾಂಡ್ ನಿರ್ಮಾಣಕ್ಕೆ ರೂ.6 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲತಿ ಸಾಲ್ಯಾನ್, ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರರಾದ ಅರುಣ್ ಭಂಡಾರಿ, ಸಹಾಯಕ ಅಭಿಯಂತರರಾದ ಮಮತಾ ಹಾಗೂ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.