ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದನ್ನು ತಡೆಯಲು ಈ ಒಂದು ಹಣ್ಣನ್ನು ಸೇವನೆ ಮಾಡಿ!

Share with

ದೇಹದಲ್ಲಿ ಕೊಲೆಸ್ಟ್ರಾಲ್ (Cholesterol) ಮಟ್ಟ ಹೆಚ್ಚಾದರೆ ಸಾಮಾನ್ಯವಾಗಿ ಅನೇಕ ರೀತಿಯ ಆಹಾರಗಳ ಸೇವನೆ ಮಾಡುವುದನ್ನು ನಿಲ್ಲಿಸಬೇಕಾಗುತ್ತದೆ. ಹಾಗಾಗಬಾರದು, ಕೆಟ್ಟ ಕೊಲೆಸ್ಟ್ರಾಲ್ ಒಂದು ಮಟ್ಟಕ್ಕಿಂತ ಹೆಚ್ಚಾಗಬಾರದು ಎಂದರೆ ನಾವು ಕೆಲವು ಆರೋಗ್ಯಕರ ಅಭ್ಯಾಸಗಳನ್ನು ದಿನನಿತ್ಯ ಜೀವನದಲ್ಲಿ ರೂಢಿಸಿಕೊಳ್ಳಬೇಕಾಗುತ್ತದೆ. ಆರೋಗ್ಯ ತಜ್ಞರು ಕೂಡ ಈ ರೀತಿಯ ಆರೋಗ್ಯಕರ ಸಲಹೆಗಳನ್ನೇ ಪಾಲನೆ ಮಾಡಲು ಹೇಳುತ್ತಾರೆ. ಇಷ್ಟೆಲ್ಲಾ ಕೇಳಿದ ಮೇಲೆ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣ ಹೇಗೆ ಮಾಡಬಹುದು ಎಂಬ ಪ್ರಶ್ನೆ ಹುಟ್ಟಬಹುದು. ಅದಕ್ಕೆ ಉತ್ತರ ಈ ಸ್ಟೋರಿಯಲ್ಲಿದೆ. ದಿನಕ್ಕೆ ಒಂದು ಪೇರಳೆ ತಿನ್ನುವುದರ ಜೊತೆಗೆ ನಿಯಮಿತವಾಗಿ ಔಷಧಿಗಳನ್ನು ತೆಗೆದುಕೊಂಡರೆ ನಿಮಗೆ ಕೊಲೆಸ್ಟ್ರಾಲ್ ಸಮಸ್ಯೆಯೇ ಬರಲ್ಲ ಎಂದರೆ ನೀವು ನಂಬುತ್ತೀರಾ! ಹೌದು. ಸ್ವಲ್ಪ ಆಶ್ಚರ್ಯವಾದರೂ ಕೂಡ ಅದು ಸತ್ಯ. ಈ ವಿಷಯದ ಕುರಿತು ಮತ್ತಷ್ಟು ಮಾಹಿತಿ ಇಲ್ಲಿದೆ.

ಪೇರಲ ಅಥವಾ ಪೇರಳೆ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ತಿಳಿದ ವಿಚಾರ. ಅದರಲ್ಲಿಯೂ ಈ ಹಣ್ಣು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ (LDL) ಅನ್ನು ಕಡಿಮೆ ಮಾಡುತ್ತದೆ. ಅದಕ್ಕಾಗಿಯೇ ಪೌಷ್ಟಿಕ ತಜ್ಞರು ಈ ಹಣ್ಣುಗಳನ್ನು ಯಥೇಚ್ಛವಾಗಿ ಸೇವನೆ ಮಾಡುವುದಕ್ಕೆ ಹೇಳುತ್ತಾರೆ. ಪೇರಳೆ ಹಣ್ಣು ಫೈಬರ್‌ ನಿಂದ ಸಮೃದ್ಧವಾಗಿದ್ದು ಇದು ರಕ್ತದಲ್ಲಿ ಸಂಗ್ರಹವಾದ ಹೆಚ್ಚುವರಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಇದು ಒಳ್ಳೆಯ ಕೊಲೆಸ್ಟ್ರಾಲ್ (HDL) ಅನ್ನು ಹೆಚ್ಚಿಸುತ್ತದೆ. ಪ್ರತಿದಿನ ಒಂದು ಪೇರಳೆ ಹಣ್ಣು ತಿನ್ನುವುದರಿಂದ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತದೆ. ಇದು ಹೃದಯವನ್ನು ಆರೋಗ್ಯವಾಗಿಡುತ್ತದೆ ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಕಡಿಮೆಯಾಗುತ್ತೆ
ಪೇರಳೆ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತನಾಳಗಳು ಮುಚ್ಚಿಹೋಗುವುದನ್ನು ತಡೆಯಲು ಸಹಾಯ ಮಾಡುತ್ತದೆ, ಇದರಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಕಡಿಮೆಯಾಗುತ್ತದೆ. ಜೊತೆಗೆ ಟ್ರೈಗ್ಲಿಸರೈಡ್‌ಗಳನ್ನು ನಿಯಂತ್ರಿಸುತ್ತದೆ. ಅಂದರೆ ಈ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಟ್ರೈಗ್ಲಿಸರೈಡ್ ಮಟ್ಟ ಕಡಿಮೆಯಾಗುತ್ತದೆ. ಇದರಲ್ಲಿ ಪೊಟ್ಯಾಸಿಯಮ್ ಅಂಶ ಸಮೃದ್ಧವಾಗಿದ್ದು, ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ
ತೂಕ ಇಳಿಸಿಕೊಳ್ಳಲು ಬಯಸುತ್ತಿರುವವರು ಪೇರಳೆ ಹಣ್ಣನ್ನು ತಿನ್ನಬಹುದು. ಏಕೆಂದರೆ ಇದರಲ್ಲಿ ಕ್ಯಾಲೋರಿಗಳು ಕಡಿಮೆ ಮತ್ತು ಫೈಬರ್ ಅಧಿಕವಾಗಿರುತ್ತದೆ. ಇದು ಹೆಚ್ಚುವರಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಮಧುಮೇಹವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ಪೇರಳೆಯಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡುತ್ತದೆ. ಮಾತ್ರವಲ್ಲ ಪೇರಳೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಉತ್ಕರ್ಷಣ ನಿರೋಧಕಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.


Share with

Leave a Reply

Your email address will not be published. Required fields are marked *