ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಬಂಗ್ರ ಕೂಳೂರಿನಲ್ಲಿ ಶುಕ್ರವಾರ(ಜುಲೈ3) ಸಂಜೆ ಸ್ಕೂಟರ್ ಗೆ ಕಂಟೈನರ್ ಲಾರಿ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತ ದುರ್ದೈವಿ ಯಾರು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸಲಾಗುತ್ತಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.




