ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಮಾ.7) ಬಜೆಟ್ ಮಂಡಿಸಲು ಸಜ್ಜಾಗಿದ್ದು ಇದು ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ ಆಗಲಿದೆ

2025ನೇ ಸಾಲಿನ ಕರ್ನಾಟಕ ಬಜೆಟ್ ಮಂಡನಗೆ ಕ್ಷಣಗಣನೆ ಆರಂಭವಾಗಿದೆ. ಸಿದ್ದರಾಮಯ್ಯನವರು ಬೆಳಗ್ಗೆ 9.30ಕ್ಕೆ ಸಚಿವ ಸಂಪುಟ ನಡೆಸಲಿದ್ದು, ಸಭೆಯಲ್ಲಿ ಬಜೆಟ್ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. ಬಳಿಕ ಬೆಳಗ್ಗೆ 10.30ಗೆ ಬಜೆಟ್ ಮಂಡನೆ ಮಾಡಲಿದ್ದಾರೆ.
ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಒತ್ತಡದ ನಡುವೆ ಸಿದ್ದರಾಮಯ್ಯ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಈ ಬಾರಿ ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂದು ಜನಸಾಮಾನ್ಯರಲ್ಲಿ ಭಾರೀ ನಿರೀಕ್ಷೆ ಹುಟ್ಟಿದೆ.




