
ಹಾಸನ: ಪ್ರಸಿದ್ಧ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಮಧ್ಯಾಹ್ನ 12 ಗಂಟೆಗೆ ಗರ್ಭಗುಡಿಯ ಬಾಗಿಲು ತೆರೆಯಲಾಗುತ್ತದೆ. ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ ಭಕ್ತರಿಗೆ ದರ್ಶನದ ಭಾಗ್ಯ ಕಲ್ಪಿಸಲಾಗಿದೆ. ಈ ಬಾರಿ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಸಂಭಾವ್ಯ ಮಳೆ ಹಾಗೂ ಭಾರೀ ಜನದಟ್ಟಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ.




