ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ದಂಪತಿ ಬಂಧನ

Share with

ಉಡುಪಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ದಂಪತಿಯನ್ನು ಉಡುಪಿ ಸೆನ್ ಪೊಲೀಸರು ಜೂ.3ರಂದು ಉಡುಪಿ ಪಿಪಿಸಿ ಕಾಲೇಜು ಸಮೀಪದ ಮನೆಯೊಂದರಿಂದ ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಅನಂತ ಪಿ. ಹಾಗೂ ಆತನ ಪತ್ನಿ ವಾಣಿಶ್ರೀ ಬಂಧಿತ ಆರೋಪಿಗಳು. ಇವರಿಂದ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇವರು ಉಡುಪಿ ಪಿಪಿಸಿ ಕಾಲೇಜು ಬಳಿಯ ಬಾಡಿಗೆ ಮನೆಯೊಂದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ವೈಬ್‌ಸೈಟ್ ಮೂಲಕ ಐಪಿಎಲ್ ಕ್ರಿಕೆಟ್‌ನ ಫೈನಲ್ ಪಂದ್ಯಾಟಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದರು.

ಈ ಬಗ್ಗೆ ದೊರೆತ ಖಚಿತ ಮಾಹಿತಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ಕೊಂಡರೆನ್ನಲಾಗಿದೆ.ಅನಂತ ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಅವರವರ ತಂಡವನ್ನು ತಿಳಿಸಿ ಅವರಿಂದ ಹಣವನ್ನು ಸಂಗ್ರಹ ಮಾಡುತ್ತಿದ್ದು, ವಾಟ್ಸಾಪ್ ಚಾಟ್ ಮೂಲಕ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹಣವನ್ನು ನೀಡುವ ಒಪ್ಪಿಗೆಯ ಮೇರೆಗೆ ಪಂಥವನ್ನು ಸ್ವೀಕರಿಸಿದ್ದನು. ಅದನ್ನು ಸಿದ್ದಾರ್ಥ ಎಂಟರ್ ಪ್ರೈಸಿಸ್ ಎಂಬ ಸ್ಥಂಸ್ಥೆಯ ಬ್ಯಾಂಕ್ ಖಾತೆ ಹಾಗೂ ಫೋನ್ ಪೇ ಮೂಲಕ ಹಣವನ್ನು ಪಣವಾಗಿಟ್ಟುಕೊಂಡಿದ್ದು, ಕ್ರಿಕೆಟ್ ಬೆಟ್ಟಿಂಗ್ ವ್ಯವಹಾರವನ್ನು ತನ್ನ ಮತ್ತು ಪತ್ನಿಯ ಬ್ಯಾಂಕ್ ಖಾತೆ ಬಳಕೆ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *