ವಾರಾಣಸಿ: ದೇಶಾದ್ಯಂತ ಸುದ್ದಿ ಮಾಡಿದ್ದ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ.
ಜ್ಞಾನವಾಪಿ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ.
ಹೈಕೋರ್ಟ್ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ, ಸರ್ವೆ ನಡೆಸಲು ಪುರಾತತ್ವ ಇಲಾಖೆಗೆ ಅನುಮತಿ ನೀಡಿ, ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿ ವಜಾಗೊಳಿಸಿದೆ. ಹಲವು ಷರತ್ತು ವಿಧಿಸಿ ಸರ್ವೆ ನಡೆಸಲು ಅನುಮತಿ ನೀಡಲಾಗಿದೆ.