ಮುಂಬಯಿ: ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮ ಅವರಿಗೆ ನವಿ ಮುಂಬಯಿಯ ಡಾ| ಅಜಿಂಕ್ಯ ಡಿ.ವೈ. ಪಾಟೀಲ್ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೆಟ್ ಪದವಿಯನ್ನು ಪ್ರದಾನ ಮಾಡಲಿದೆ.

ಶನಿವಾರ ನಡೆಯುವ ವಿವಿಯ 10ನೇ ಘಟಿಕೋತ್ಸವದ ವೇಳೆ ರೋಹಿತ್ ಅವರನ್ನು ಅಪ್ರತಿಮ ನಾಯಕತ್ವಕ್ಕಾಗಿ ಗೌರವಿಸಲಾಗುತ್ತದೆ. ಅಂದು ರೋಹಿತ್ ಶರ್ಮ ಪ್ರಮುಖ ಆಕರ್ಷಣೆಯಾಗಿರಲಿದ್ದಾರೆ ಎಂದು ವಿವಿ ತಿಳಿಸಿದೆ.
ಕ್ರಿಕೆಟ್‌ಗೆ ರೋಹಿತ್ ಶರ್ಮಾ ನೀಡಿದ ಅಸಾಧಾರಣ ಕೊಡುಗೆಗಳಿಗಾಗಿ ಅವರನ್ನು ಗೌರವಿಸಲಾಗುತ್ತಿದೆ ಎಂದು ವಿಶ್ವವಿದ್ಯಾಲಯವೇ ಘೋಷಿಸಿದೆ. ಕ್ರಿಕೆಟ್ ಲೋಕದಲ್ಲಿ “ಹಿಟ್‌ಮ್ಯಾನ್” ಎಂದೇ ಪ್ರಸಿದ್ಧರಾಗಿರುವ ರೋಹಿತ್ ಶರ್ಮಾ ಇನ್ನು ಮುಂದೆ ಡಾ. ರೋಹಿತ್ ಶರ್ಮಾ ಎನಿಸಿಕೊಳ್ಳಲಿದ್ದಾರೆ.
ರೋಹಿತ್ ಶರ್ಮಾ ಇದುವರೆಗೆ ಟೀಂ ಇಂಡಿಯಾ ಪರ 508 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ಸಮಯದಲ್ಲಿ, ಅವರು 20,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರಲ್ಲಿ 111 ಅರ್ಧಶತಕಗಳು ಮತ್ತು 50 ಶತಕಗಳು ಸೇರಿವೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ವಿಶ್ವ ದಾಖಲೆ ಕೂಡ ರೋಹಿತ್ ಹೆಸರಿನಲ್ಲಿದೆ.




