ಮಂಗಳೂರು: ದುಬೈನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಭಾರೀ ಪ್ರಮಾಣದ ಚಿನ್ನ ಪತ್ತೆಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈ-ಮಂಗಳೂರು ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕನು 14.50 ಲಕ್ಷ ಮೌಲ್ಯದ ೨೪೨ ಗ್ರಾಂ. ಚಿನ್ನವನ್ನು ಪೌಡರ್ ರೂಪದಲ್ಲಿ, ರಟ್ಟಿನ ಪೆಟ್ಟಿಗೆಯ ಒಳಭಾಗದಲ್ಲಿ ದಪ್ಪ ನೀಲಿ ಹಾಳೆಗಳ ನಡುವೆ ಅಡಗಿಸಿಟ್ಟು ಸಾಗಣೆ ಮಾಡುತ್ತಿದ್ದ ಎನ್ನಲಾಗಿದೆ. ಪ್ರಯಾಣಿಕನನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆಯನ್ನು ಮುಂದುವರೆಸಿದ್ದಾರೆ.