ಸೈಕ್ಲೋನ್ ಎಫೆಕ್ಟ್ – ರಾಜ್ಯದ ಎ. 17ರ ತನಕ ಭರ್ಜರಿ ಮಳೆ

Share with

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಏಪ್ರಿಲ್‌ 17ರ ವರೆಗೆ ಬೆಂಗಳೂರು ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹೌದು, ಕೆಲ ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ.

ರಾಜ್ಯದ 25 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಂದು ಹವಮಾನ ಇಲಾಖೆ ತಿಳಿಸಿದೆ.


Share with

Leave a Reply

Your email address will not be published. Required fields are marked *