ಡಿ.23: ನೆಟ್ಲ ಶಾಲೆಯಲ್ಲಿ ತರಗತಿ ಕೊಠಡಿ ಉದ್ಘಾಟನೆ, ಶಾಲಾ “ವಜ್ರ ಸಂಭ್ರಮ -2023 “

Share with

ಬಂಟ್ವಾಳ: ತಾಲೂಕಿನ ಗೋಳ್ತ ಮಜಲು ಗ್ರಾಮದ ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ 27.80 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ತರಗತಿ ಕೊಠಡಿ ಉದ್ಘಾಟನೆ ಹಾಗೂ ಶಾಲಾ “ವಜ್ರ ಸಂಭ್ರಮ -2023 ” ಕಾರ್ಯಕ್ರಮ ಡಿ.23ರಂದು ಬೆಳಿಗ್ಗೆ ಗಂಟೆ 9 ರಿಂದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜರಗಲಿದೆ.

ಕರ್ನಾಟಕ ವಿಧಾನ ಸಭೆಯ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘನ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ದಿನೇಶ್ ಗುಂಡೂರಾವ್ ವಿವೇಕ ತರಗತಿ ಕೊಠಡಿಯ ಉದ್ಘಾಟನೆ ನೆರವೇರಿಸಲಿದ್ದು ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಲೋಕಸಭಾ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಡೆ, ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಅಶೋಕ ರೈ,ಕರ್ನಾಟಕ ರಾಜ್ಯ ವಿಧಾನಪರಿಷತ್ ಸದಸ್ಯರುಗಳಾದ ಕೋಟ ಶ್ರೀನಿವಾಸ್ ಪೂಜಾರಿ, ಬಿ ಎಂ ಫಾರೂಕ್, ಹರೀಶ್ ಕುಮಾರ್, ಎಸ್ ಎಲ್ ಭೋಜೆ ಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಬಂಡಾರಿ ಭಾಗವಹಿಸಲಿದ್ದು, ವಿಶೇಷ ಆವಾನಿತರಾಗಿ ಗೋಳ್ತ ಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರೇಮ, ಉಪಾಧ್ಯಕ್ಷರಾದ ಜಯಂತ ಮುಕ್ಕಾರ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಭಿಷೇಕ್, ಸವಿತಾ, ದೀಪಕ್ ಕುಮಾರ್, ಹರಿಣಾಕ್ಷಿ,ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ನೋಣಯ್ಯ ನಾಯ್ಕ, ದೈಹಿಕ ಪರಿವೀಕ್ಷಕರಾದ ವಿಷ್ಣು ನಾರಾಯಣ ಹೆಬ್ಬಾರ್, ಕ್ಷೇತ್ರ ಸಮನ್ವಯ ಅಧಿಕಾರಿ ರಾಘವೇಂದ್ರ ಬಲ್ಲಾಳ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಜಯ ಶಂಕರ್ ಆಳ್ವಾ ಎಂ , ಶಿಕ್ಷಣ ಸಂಯೋಜಕಿ ಪ್ರತಿಮಾ ವೈ ವಿ, ಕಲ್ಲಡ್ಕ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜ್ಯೋತಿ, ಮೊದಲಾದವರು ಗೌರವ ಉಪಸ್ಥಿತರಿರಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ನೆಟ್ಲ ಶಾಲಾ ಮಕ್ಕಳಿಂದ ರಸಮಂಜರಿ ಕಾರ್ಯಕ್ರಮ, ಸಾಯಂಕಾಲ ಗಂಟೆ 6 ರಿಂದ ನೆಟ್ಲ ಹಾಗೂ ಬೊಮ್ಮನಕೋಡಿ ಅಂಗನವಾಡಿ ಪುಟಾಣಿಗಳಿಂದ, ನೆಟ್ಲ ಶಾಲಾ ಮಕ್ಕಳಿಂದ, ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿರುವುದು . ರಾತ್ರಿ ಗಂಟೆ 9:00 ರಿಂದ ಹಿರಿಯ ವಿದ್ಯಾರ್ಥಿಗಳು ಹಾಗೂ ರಂಗವಲ್ಲಿ ಕಲಾವಿದರು ನೆಟ್ಲ ಇವರಿಂದ ರಹಸ್ಯಮಯ ತುಳು ನಾಟಕ “ಗುಡ್ಡೆಡ್ ಭೂತ ಉಂಡುಗೆ ” ನಡೆಯಲಿರುವುದು ಎಂದು ನೆಟ್ಲ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭಾಸ್ಕರ್ ಕುಲಾಲ್ ಪ್ತಿರಕಟಣೆಯಲ್ಲಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *