ಬಂಟ್ವಾಳ : ಬಂಟ್ವಾಳ ತಾಲೂಕಿನ ಧಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ ಇಲ್ಲಿ 2024-25 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿಸೆಂಬರ್ 6 ಶುಕ್ರವಾರ ಸಾಯಂಕಾಲ ಗಂಟೆ 3 ರಿಂದ ನಡೆಯಲಿರುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಎಸ್ ರಾವ್ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆ ಯನ್ನು ಬಂಟ್ವಾಳ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಯು ಮಾಡಲಿರುವರು.
ವಿಶೇಷ ಆಹ್ವಾನಿತರಾಗಿ ಕಡೇಶಿವಾಲಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುರೇಶ್ ಕನ್ನೋಟ್ಟು,ಪಂಚಾಯತ್ ಸದಸ್ಯರುಗಳಾದ ಶೀನ ನಾಯ್ಕ ನೆಕ್ಕಿಲಾಡಿ, ಪ್ರಮೀಳಾ ಕೋಡಿ,ವಶೀತಾ ನೆತ್ತರ,ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್ ಜಿ,
ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯ ಅಧಿಕಾರಿ ವಿದ್ಯಾಕುಮಾರಿ, ಕಡೇಶಿವಾಲಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್, ಕಲ್ಲಡ್ಕ ವಲಯ ಶಿಕ್ಷಣ ಸಂಯೋಜಕಿ ಪ್ರತಿಮಾ ವೈ, ಕೆದಿಲ ಕ್ಲಸ್ಟರ್ ಸಿ ಆರ್ ಪಿ ಸುಧಾಕರ್ ಭಟ್, ಬೆಂಗಳೂರು ಕೆನರ ಇಂಡಸ್ಟ್ರೀಸ್ ಮುಖ್ಯಸ್ಥ ಉತ್ತಮ ಕುಮಾರ್ ಶೆಟ್ಟಿ, ಕಡೇಶಿವಾಲಯ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿದ್ಯಾದರ್ ರೈ,ಕಡೇಶಿವಾಲಯ ಆಂಗ್ಲ ಮಾಧ್ಯಮ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಗಣೇಶ್ ಆರ್ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಮೊದಲಾದವರು ಭಾಗವಹಿಸಲಿರುವರು.
ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿರುವುದು ಎಂದು ಕಡೇಶಿವಾಲಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ಎಂ, ಆಂಗ್ಲ ಮಾಧ್ಯಮ ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಮಾಧವ ರೈ, ಶಾಲಾ ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೆ ಜಂಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.