ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಸಾವು

Share with

ಬಂಟ್ವಾಳ: ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ವೀರಕಂಬಗ್ರಾಮದ ಮಜ್ಜೋನಿ ದಿವಂಗತ ಕೃಷ್ಣಪ್ಪ ಮೂಲ್ಯರ ಪುತ್ರ  ಜಯರಾಮ‌ ಮೂಲ್ಯ(45) ಮೃತಪಟ್ಟವರಾಗಿದ್ದಾರೆ.

ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಲಾಗಿದೆ.

ಅ ಬಳಿಕ ಇವರು ಇಲಾಖೆಯೊಳಗೆ ಒಬ್ಬನೇ ಕರ್ತವ್ಯದಲ್ಲಿದ್ದು, ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ಟೇಬಲ್ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿರಬೇಕು ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

ಬೆಳಿಗ್ಗೆ ಸುಮಾರು 6.30 ವರೆಯವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕ ಜಯರಾಮ ಅವರು ಕಿಟಕಿ ಬಾಗಿಲು ತೆರದು ನೋಡಿದಾಗ ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ.ಬಾಗಿಲಿನ ಚಿಲಕ ಮುರಿದು ಒಳಗೆ ಹೋಗಿ ನೋಡಿದಾಗ ಇವರು ಅದಾಗಲೇ ಮೃತಪಟ್ಟ ಬಗ್ಗೆ ಮೇಲ್ನೋಟಕ್ಕೆ ಕಂಡುಬಂದಿದೆಯಾದರೂ, ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ,ಪರೀಕ್ಷೆ ನಡೆಸಿದಾಗ ಅವರು ಮೃತಪಟ್ಟ ಬಗ್ಗೆ ಇಲ್ಲಿನ ವೈದ್ಯರು ತಿಳಿಸಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅವರು ತಾಯಿ ಹಾಗೂ ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.


Share with

Leave a Reply

Your email address will not be published. Required fields are marked *