Vittla: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಕೇರಳ ಬಾಯಾರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನೊಂದ ಬಾಲಕಿ ಐದು ಮಂದಿಯ ಹೆಸರನ್ನು ದೂರಿನಲ್ಲಿ ತಿಳಿಸಿದ್ದು ಮೂರು ಮಂದಿಯನ್ನು ರವಿವಾರ(ಜು.30) ಬಂಧಿಸಿದ್ದು, ಓರ್ವನನ್ನು ಸೋಮವಾರ(ಜು.31) ಬಂಧಿಸಿದರೆ, ಇನ್ನೋರ್ವ ಆರೋಪಿಯನ್ನು ಮಂಗಳವಾರ(ಆ.1) ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.