ಉಡುಪಿ ಕಾರ್ಕಳ ಕೆಎಸ್ಆರ್ಟಿಸಿ ಬಸ್ನಲ್ಲಿ ಅಪಾಯಕಾರಿ ಪ್ರಯಾಣ

Share with

ಉಡುಪಿ : ಕಾರ್ಕಳದಿಂದ ಉಡುಪಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ನ ಹಿಂಬದಿಯ ಬಾಗಿಲಿನ ಮೆಟ್ಟಿಲು ತುಂಡಾಗಿ ನೇತುಕೊಂಡು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ದೃಶ್ಯ ವೈರಲ್ ಆಗಿತ್ತು. ಅದೇ ಬಸ್ನಲ್ಲಿ ಪ್ರಯಾಣಿಕರು ಅಪಾಯಕಾರಿ ಯಾನ ಕೈಗೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿತ್ತು. ಈ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಕೂಡ ಸಾಮಾಜಿಕ ಮಾಧ್ಯಮಗಳ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿಗಳ ಕಚೇರಿಯಿಂದ (ಸಿಎಂಒ) ಕ್ಷಿಪ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದರ ಜತೆಗೆ, ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka ಎಕ್ಸ್‌ ಖಾತೆಗೆ ಟ್ಯಾಗ್‌ ಮಾಡಿ ಸಂದೇಶ ಪ್ರಕಟಿಸುವಂತೆ ಮನವಿ ಮಾಡಿದೆ.


Share with

Leave a Reply

Your email address will not be published. Required fields are marked *