ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ: ಅಕ್ಟೋಬರ್ 22ರಂದು ರಜೆ ಘೋಷಣೆ

Share with



ಮಂಗಳೂರು: ದಸರಾ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅಕ್ಟೋಬರ್ 22ರಂದು ಹೆಚ್ಚುವರಿ ರಜೆ ಘೋಷಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಈ ಕುರಿತು ಆದೇಶ ಹೊರಡಿಸಿದ್ದು, 1ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ರಜೆ ಅನ್ವಯವಾಗಲಿದೆ.

ಮಂಗಳೂರು ದಸರಾ ಮಹೋತ್ಸವದ ಕೊನೆಯ ದಿನವಾದ ಅಕ್ಟೋಬರ್ 21ರಂದು ರಾತ್ರಿ ತಡವಾಗಿ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶೋಭಾಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿಯನ್ನು ಪರಿಗಣಿಸಿ ರಜೆಯನ್ನು ಒಂದು ದಿನ ವಿಸ್ತರಿಸಲಾಗಿದೆ. ಈ ಮೂಲಕ ದಸರಾ ರಜೆ ಅಕ್ಟೋಬರ್ 22ರವರೆಗೆ ಮುಂದುವರಿಯಲಿದ್ದು, ಅಕ್ಟೋಬರ್ 23ರಿಂದ ಶಾಲೆಗಳು ಎಂದಿನಂತೆ ಪುನರಾರಂಭಗೊಳ್ಳಲಿವೆ. ಹೆಚ್ಚುವರಿ ರಜೆಯಿಂದ ಉಂಟಾಗುವ ಶೈಕ್ಷಣಿಕ ಅವಧಿಯನ್ನು ಸರಿದೂಗಿಸಲು ಇಲಾಖೆಯು ಸೂಚನೆ ನೀಡಿದೆ.


Share with

Tags:

Leave a Reply

Your email address will not be published. Required fields are marked *