ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮತ್ತೆ ಮುಂದುವರೆದಿದ್ದು, ಓರ್ವ ಗಾಯಗೊಂಡಿದ್ದಾರೆ. ಯೋಧ ಕಳೆದ ಮೂರು ದಿನಗಳಲ್ಲಿ ಕೇಂದ್ರಾಡಳಿತ ಪ್ರದೇಶ ನಡೆದ ನಾಲ್ಕನೇ ಎನ್‌ಕೌಂಟರ್ ಇದಾಗಿದ್ದು, ಜಮ್ಮುವಿನ ದೋಡಾ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ ಎಂದು ಹೇಳಲಾಗಿದೆ.
ಜೂನ್ 9 ರಂದು ರಿಯಾಸಿಯಲ್ಲಿ ಭಯೋತ್ಪಾದಕರು ಯಾತ್ರಾರ್ಥಿಗಳಿದ್ದ ಬಸ್ಸಿನ ಮೇಲೆ ದಾಳಿ ನಡೆಸಿದ್ದರು, ಇದರಲ್ಲಿ ಒಂಬತ್ತು ಜನರು ಸಾವನ್ನಪ್ಪಿದರು. ಇದಾದ ಬಳಿಕ ಕಥುವಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿತ್ತು, ಈತನ್ಮಧ್ಯೆ ಜಮ್ಮುವಿನ ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಮತ್ತೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ. ಘಟನೆ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದು ಭದ್ರತಾ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.