ಸಂವಿಧಾನ ಜಾಗೃತಿ ಜಾಥಾದ ಮೂಲಕ ಸಾರ್ವಜನಿಕರಿಗೆ ಸಂವಿಧಾನದ ಮಹತ್ವದ ಅರಿವು ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

Share with

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಮೂಲಕ ಎಲ್ಲಾ ಕಡೆ ಸಾರ್ವಜನಿಕರಿಗೆ ಸಂವಿಧಾನದ ಮಹತ್ವದ ಬಗ್ಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ತಿಳಿಸಿದರು.

ಸಮಾಜ ಕಲ್ಯಾಣ ಸಚಿವರಾದ ಡಾ|ಹೆಚ್.ಸಿ ಮಹಾದೇವಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕಾ ಖರ್ಗೆ ಅವರು ಜಂಟಿಯಾಗಿ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆ

ಅವರು ಫೆ.5ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ಸಮಾಜ ಕಲ್ಯಾಣ ಸಚಿವರಾದ ಡಾ|ಹೆಚ್.ಸಿ ಮಹಾದೇವಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕಾ ಖರ್ಗೆ ಅವರು ಜಂಟಿಯಾಗಿ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಡಿ ವಿವಿಧ ತಂಡಗಳನ್ನು ರಚಿಸಿಲಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿನಾಟಕಗಳ ಮೂಲಕ ಜನರಿಗೆ ಸಂವಿಧಾನ ಪರಿಕಲ್ಪನೆಗಳ ಬಗ್ಗೆ ಅರಿವು ಮೂಡಲಾಗುತ್ತಿದೆ. ಈಗಾಗಲೇ ಸಂವಿಧಾನ ಜಾಗೃತಿ ಜಾಥಾಕ್ಕೆ ವಿವಿಧ ಕಡೆ ಉತ್ತಮ ಸ್ಪಂದನೆ ದೊರಕಿದೆ. ಈ ಜಾಗೃತಿ ಜಾಥಾದಲ್ಲಿ ಜಿಲ್ಲೆಯಾದ್ಯಂತ ಸಂವಿಧಾನದ ವಿವಿಧ ಅಂಶಗಳ ಮಹತ್ವ ಸಾರುವ ಆಕರ್ಷಕ ಸ್ಥಬ್ಧಚಿತ್ರ ಹಾಗೂ ಕಲಾ ತಂಡಗಳ ಪ್ರದರ್ಶನ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಆನಂದ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ, ಕಾಲೇಜು ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ದೇವಿಪ್ರಸಾದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *