ಮಹಾರಾಷ್ಟ್ರ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಂದಾಗಿದ್ದಾರೆ.
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸಲು ಮಾಜಿ ಮುಖ್ಯಮಂತ್ರಿ ಅವರನ್ನು ತಮ್ಮ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ನಾಯಕರನ್ನು ವಿನಂತಿಸಿದರು.
ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, “ಮಹಾರಾಷ್ಟ್ರದಲ್ಲಿನ ಫಲಿತಾಂಶದ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ, ನಾನು ಪಕ್ಷವನ್ನು ಮುನ್ನಡೆಸುತ್ತೇನೆ. ಸರ್ಕಾರ ಜವಾಬ್ದಾರಿಯಿಂದ ಮುಕ್ತಗೊಳಿಸಿದ್ರೆ ನಾನು ಪಕ್ಷಕ್ಕಾಗಿ ಶ್ರಮಿಸಬಹುದು” ಎಂದು ಹೇಳಿದ್ದಾರೆ.