ಒಂದೇ ಮಗು ಇದ್ದರೂ ಕೂಡ ಸರಕಾರಿ ಶಾಲೆ ಮುಚ್ಚದೆ ಇರಲು ನಿರ್ಧಾರ:ಮಧು ಬಂಗಾರಪ್ಪ

Share with

ದಾವಣಗೆರೆ: ಒಂದೇ ಮಗು ಇದ್ದರೂ ಕೂಡ ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚದೇ ಇರಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ಬಿಇಐಟಿ ಕಾಲೇಜು ಆವರಣದಲ್ಲಿ ಶನಿವಾರ (ಸೆ.13) ಆಯೋಜಿಸಿದ್ದ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ಎರಡನೇ ರಾಜ್ಯ ಮಟ್ಟದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದ 13 ಸಾವಿರ ಶಾಲೆಗಳಲ್ಲಿ ಮಕ್ಕಳ ಹಾಜರಾತಿ 25ಕ್ಕಿಂತಲೂ ಕಡಿಮೆ ಇದೆ. ಆದರೂ ಯಾವುದೇ ಶಾಲೆಯನ್ನು ಮುಚ್ಚದೇ ಇರಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಈಗ 800 ಕೆಪಿಎಸ್ ಶಾಲೆಗಳನ್ನು ಪ್ರಾರಂಭ ಮಾಡಲು 3500 ಕೋಟಿ ಅನುದಾನವನ್ನು ಇಡಲಾಗಿದೆ. ಅಷ್ಟೇ ಅಲ್ಲದೇ ಹೊಸ ಪಿಯು ಕಾಲೇಜ್‌ಗಳನ್ನು ಆರಂಭಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.


Share with

Leave a Reply

Your email address will not be published. Required fields are marked *