ಪೆರ್ಲ: ಕಾಟುಕುಕ್ಕೆ ಸೇವಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ, ಸಾಮಾಜಿಕ, ಧಾರ್ಮಿಕ ಮುಂದಾಳು ದಿ.ಬಾಬು ಬಂಗೇರ ಅವರ ಪುತ್ರ ದೀಪಕ್ ಭಂಡಾರದಮನೆ (57) ಹೃದಯಾಘಾತಕ್ಕೊಳಗಾಗಿ ಡಿ.13ರಂದು ಬೆಳಗ್ಗೆ ನಿಧನರಾದರು.
ಮನೆ ಸಮೀಪದ ತೋಟದಲ್ಲಿ ಕೆಲಸ ನಿರತರಾಗಿದ್ದ ಇವರಿಗೆ ತೀವ್ರ ಎದೆ ನೋವು ಕಾಣಿಸಿದ್ದು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಫಲಕಾರಿಯಾಗಲಿಲ್ಲ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಇವರು ಎಣ್ಮಕಜೆ ಮಂಡಲ ಕಾಂಗ್ರೆಸ್ ಕಾರ್ಯದರ್ಶಿ, ಕುಂಬಳೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಸಾಮಾಜಿಕ ವಲಯದಲ್ಲಿ ಎಲ್ಲರಿಗೂ ಆಪ್ತರೂ ಆಗಿದ್ದ ಇವರು ಕಾಟುಕುಕ್ಕೆ ಶ್ರೀಸುಬ್ರಾಯ ದೇವಸ್ಥಾನದ ಆಡಳಿತ ಮಂಡಳಿ ಮಾಜಿ ಸದಸ್ಯರಾಗಿದ್ದರು.
ಮೃತರು ಪತ್ನಿ ರವಿಕಲಾ, ತಾಯಿ ಗೌರಿ, ಮಕ್ಕಳಾದ ಶ್ರೇಯಸ್, ಸಮರ್ಥ್, ಸಹೋದರ ಪ್ರಕಾಶ್, ಸಹೋದರಿ ಚಂದ್ರಕಲಾ ಹಾಗೂ ಅಪಾರ ಬಂಧುಬಳಗವನ್ನಗಲಿದ್ದಾರೆ. ಮೃತರ ನಿಧನಕ್ಕೆ ಕಾಟುಕುಕ್ಕೆ ಸೇವಾ ಸಹಕಾರಿ ಬ್ಯಾಂಕ್ ಆಡಳಿತ ಸಮಿತಿ ಮತ್ತು ನೌಕರರು, ಎಣ್ಮಕಜೆ ಮಂಡಲ ಕಾಂಗ್ರೆಸ್, ಕುಂಬಳೆ ಬ್ಲಾಕ್ ಕಾಂಗ್ರೆಸ್ ಸಮಿತಿ, ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಸಂತಾಪ ವ್ಯಕ್ತಪಡಿಸಿದ್ದಾರೆ.